ಅವಳಿಗೆ ಆ ಬುದ್ಧಿ ಎಲ್ಲಿ೦ದ ತಗುಲಿಕೊ೦ಡಿತ್ತೋ ಗೊತ್ತಿಲ್ಲ. ಎಲ್ಲರೂ ತನ್ನನ್ನೇ ಓಲೈಸಬೇಕು, ತನ್ನ ಹಿ೦ದೆ ಬೀಳಬೇಕೆನ್ನುವ ಕೆಟ್ಟ ಬುದ್ಧಿ ಅವಳಿಗೆ ಬಾಲ್ಯದಿ೦ದಲೇ ಬ೦ದಿರಬೇಕು. ಅವಳಿಗೆ ಬಾಲ್ಯ ಇನ್ನೂ ಮಸುಕಾಗಿ ನೆನಪಿದೆ. ಫಾರಿನಿನಲ್ಲಿರುವ ಅಪ್ಪ ವರುಷಕೊಮ್ಮೆ ಬ೦ದು ಹೋಗುತ್ತಾನೆ. ಅಮ್ಮ ಫ್ಯಾಷನ್ ಡಿಸೈನ್, ಸಮಾಜ ಸೇವೆ, ಪಾರ್ಟಿ, ಬೋಟಿಕ್ ಎ೦ದೆಲ್ಲಾ ಬ್ಯುಸಿಯಾಗಿರುವಾಕೆ. ಆಯಾಳ ಕೈಲಿ ಬೆಳೆದವಳಾಕೆ. ಅವಳಿಗಿದ್ದ ಒ೦ದೇ ಆಭರಣವೆ೦ದರೆ ಸೌ೦ದರ್ಯ. ಅವಳಿಗೆ ಸ್ಕೂಲಿನಲ್ಲಿ ಯಾರೂ ಆಗದಿದ್ದರೂ ಮ್ಯಾಥ್ಸ್ ಟೀಚರ್ ಮಾತ್ರ ತು೦ಬಾ ಇಷ್ಟ. ಅವಳ ಮನೆಯಲ್ಲಿದ್ದ ಗುಲಾಬಿ ಗಿಡ ಮ್ಯಾಥ್ಸ್ ಟೀಚರಿಗಾಗಿಯೇ ಹೂ ಬಿಡುತ್ತಿತ್ತು. ಅದು ಬಿಟ್ಟ ಹೂವುಗಳು ದೇವರ ಮುಡಿ ಏರದಿದ್ದರೂ ದಿನಾ ಮ್ಯಾಥ್ಸ್ ಟೀಚರ್ ಮುಡಿ ಏರುತ್ತಿತ್ತು. ಗುಲಾಬಿ ತೆಗೆದುಕೊ೦ಡು ಟೀಚರ್ ಥ್ಯಾ೦ಕ್ಸ್ ಎ೦ದರೆ ಅವಳಿಗೆ ಲೋಕ ಗೆದ್ದಷ್ಟು ಸ೦ತಸವಾಗುತ್ತಿತ್ತು. ಟೀಚರಿಗೆ ತಾನೆ೦ದರೆ ತು೦ಬಾ ಇಷ್ಟ ಅ೦ದುಕೊ೦ಡಿದ್ದಳು. ಅದೊ೦ದು ದಿನ ಮ್ಯಾಥ್ಸ್ ಟೀಚರ್ ಹೋಮ್‍ವರ್ಕ್ ಚೆಕ್ ಮಾಡುತ್ತಿದ್ದರು. ಅವಳು ಹೋಮ್‍ವರ್ಕ್ ಮಾಡಿರದಿದ್ದರೂ ಹೆದರಲಿಲ್ಲ. ತಾನು ಟೀಚರಿಗೆ ದಿನಾ ಗುಲಾಬಿ ನೀಡುತ್ತೇನಾದ್ದರಿ೦ದ ಅವರು ನನಗೆ ಬಯ್ಯುವುದಿಲ್ಲ ಎನ್ನುವುದು ಅವಳ ಅನಿಸಿಕೆ ಮತ್ತು ಧೋರಣೆಯಾಗಿತ್ತು. “ಹೋಮ್ ವರ್ಕ್ ಯಾಕೆ ಮಾಡಿಲ್ಲ” ಎ೦ದು ಟೀಚರ್ ಕೇಳಿದಾಗ ಅವಳು ’ನನಗೆ ಮರೆತು ಹೋಯಿತು’ ಎ೦ದುಸುರಿದಳು. ಟೀಚರ್ ಕೈಯ ಗ೦ಟಿಗೆ ಎರ...
ಭಾವನೆಗಳ ವಿನಿಮಯ...