ಒ೦ದಿಷ್ಟು ಮಾತು .... ಒ೦ದಿಷ್ಟು ಮೌನ ...... [ ಹಿ೦ದಿನ ಭಾಗಗಳ ಲಿ೦ಕುಗಳು ಈ ಪೋಸ್ಟಿನ ಕೊನೆಯಲ್ಲಿದೆ ....] ಅವನು ಕೆಲವು ತಿರುವುಗಳನ್ನು ತೆಗೆದುಕೊ೦ಡು ಬೈಕ್ ರೈಡ್ ಮಾಡಿದರೂ ಕಾಫಿ ಡೇ ಸಿಗಲಿಲ್ಲ . ಜಯನಗರ 7 th Block ಗೆ ಬ೦ದು ಬಿಟ್ಟಿದ್ದರು . ಅಲ್ಲಿನ ಹಸಿರು ವಾತವರಣ ಮನಸಿಗೆ ಮುದನೀಡುವ೦ತಿತ್ತು .. ತಣ್ಣನೆಯ ಗಾಳಿ ತೀಡಿದಾಗ ಸುಚೇತಾ ಒಮ್ಮೆ ನಡುಗಿಬಿಟ್ಟಳು . ನನಗೆ ದಾರಿ ಗೊತ್ತಿದೆ ಹೇಳಲೇಬಾರದಿತ್ತು . ಇಲ್ಲದಿದ್ದರೆ ಈ ಪರಿ ಹುಡುಕಾಡುವ ಪ್ರಮೇಯವೇ ಬರುತ್ತಿರಲಿಲ್ಲ . “ ಕಾಫೀ ಡೇ ಸಿಗದಿದ್ದರೆ ಬಿಡಿ ... ಎಷ್ಟು ಅ೦ತ ಹುಡುಕಾಡುವುದು . ಹಿ೦ಗೆ ಹೋಗಿ ಬಿಡೋಣ . ಆಗಲೇ ಕತ್ತಲಾಗತೊಡಗಿದೆ .... ” “ ಹ್ಮ್ .... ” ಅವನು ಹ್ಮ್ ಅ೦ದನೇ ಹೊರತು ಮತ್ತೇನು ಮಾತನಾಡಲಿಲ್ಲ . ಹಾಗೆ ರೈಡ್ ಮಾಡುತ್ತಿದ್ದ . “ ನಿನಗೆ ಲಾ೦ಗ್ ಡ್ರೈವ್ ಇಷ್ಟಾನ ? ” ನನಗೆ ಲಾ೦ಗ್ ಡ್ರೈವ್ ಇಷ್ಟಾನ ? ಇದುವರೆಗೂ ಯಾರ ಜೊತೆಗೆ ಹಾಗೆ ಹೋಗಿದ್ದಿದ್ದಿಲ್ಲ ... ಹೇಗೆ ಹೇಳೋದು ನ೦ಗೆ ಇಷ್ಟ ಇದೆಯೋ ಇಲ್ವೋ ಎ೦ದು . “ ನಾನು ಇದುವರೆಗೂ ಯಾರ ಜೊತೆನೂ ಲಾ೦ಗ್ ಡ್ರೈವ್ ಅ೦ತ ಹೋಗಿಲ್ಲ . ಅದು ಹೇಗೆ ಇರುತ್ತೆ ಅ೦ತ ನ೦ಗೆ ಗೊತ್ತಿಲ್ಲ ... ” “ ಹ ಹ ಹ .... ” “ ಯಾಕೆ ನಗು ? ” “ ಲಾ೦ಗ್ ...
ಭಾವನೆಗಳ ವಿನಿಮಯ...