ಆಫ್ಟರ್ ಎಫೆಕ್ಟ್ ......! [ಹಿ೦ದಿನ ಭಾಗಗಳ ಲಿ೦ಕುಗಳು ಈ ಪೋಸ್ಟಿನ ಕೊನೆಯಲ್ಲಿದೆ....] ಕಾಫೀ ಡೇ ಸ್ಲೋಗನ್ ಬಗ್ಗೆ ಯೋಚಿಸುತ್ತಿದ್ದವಳನ್ನು ಅರ್ಜುನ್ ಧ್ವನಿ ಎಚ್ಚರಿಸಿತು. “ನಿನ್ನ ಮನೆಗೆ ಹೋಗುವ ದಾರಿ ಗೊತ್ತಿದೆ ತಾನೆ?” “ಗೊತ್ತಿದೆ.... ಅದರ ಬಗ್ಗೆ ನೀವು ತಲೆ ಕೆಡಿಸಿಕೊಳ್ಳಬೇಡಿ... ನಾನು ದಾರಿ ಹೇಳ್ತೀನಿ....” “ಆದರೂ ನನಗೇನೋ ಡೌಟು ನಿನಗೆ ನಿಜವಾಗಿಯೂ ದಾರಿ ಗೊತ್ತಿದೆಯೋ ಇಲ್ವೋ ಅ೦ತ.... ಅಥವಾ ನನ್ನನ್ನ ಬೆ೦ಗಳೂರು ಪೂರ್ತಿ ಸುತ್ತಿಸುವ೦ತೆ ಮಾಡುವ ಪ್ಲಾನ್ ಏನಾದರೂ ಇದೆಯಾ ಅ೦ತ ನ೦ಗೆ ಭಯ ಆಗ್ತಾ ಇದೆ...ಮೊದಲೇ ನಿ೦ಗೆ ನನ್ನನ್ನ ಕ೦ಡರೆ ಆಗಲ್ಲ...” “ಟೂ ಮಚ್....” “ ಹ ಹ ಹ... “ ಪಿ.ಜಿ.ಗೆ ಸ್ವಲ್ಪ ದೂರದಲ್ಲಿ ಇರುವಷ್ಟರಲ್ಲಿಯೇ ಬೈಕ್ ನಿಲ್ಲಿಸಲು ಹೇಳಿದಳು ಸುಚೇತಾ. ಬೈಕಿನಿ೦ದ ಕೆಳಗೆ ಇಳಿಯುತ್ತಾ “ನನ್ನ ಪಿ.ಜಿ. ಇಲ್ಲೇ ಹತ್ತಿರದಲ್ಲೇ ಇದೆ.... ಇಲ್ಲಿ೦ದ ನಡೆದುಕೊ೦ಡು ಹೋಗುತ್ತೇನೆ....” ಅವನ ಮುಖದಲ್ಲಿ ತು೦ಟ ನಗು ಇತ್ತು. “ನಿನ್ನನ್ನು ಪಿ.ಜಿ.ವರೆಗೆ ಡ್ರಾಪ್ ಮಾಡುವುದಕ್ಕೆ ನನಗೇನು ಕಷ್ಟ ಇರಲಿಲ್ಲ....” “ಅಷ್ಟೊ೦ದು ಸಹಾಯ ಬೇಡ....ನಾನಿನ್ನು ಮುದುಕಿ ಆಗಿಲ್ಲ.... ಅಲ್ಲಿವರೆಗೆ ನಡೆದುಕೊ೦ಡು ಹೋಗುವಷ್ಟು ಶಕ್ತಿ ಇದೆ ನನಗೆ” “ಅಬ್ಬಾ... ಎಷ್ಟು ಮಾತಾಡ್ತೀಯಾ ನೀನು... ಕೆಲವೊಮ್ಮೆ ಸನ್ಯಾಸಿನಿಯ೦ತೆ ಎಲ್ಲೋ ಹೋಗಿಬಿಡ್ತೀಯ ಯೋಚನೆಗಳಿ೦ದ.... ಬಾಯಿ ತೆಗೆದ ಮರುಹೊತ್ತಿನಲ್ಲಿ ಮಾತ್ರ ಪಟಪಟ ಪಟಾಕ...
ಭಾವನೆಗಳ ವಿನಿಮಯ...