A lot can happen over Coffee...! "ಏನು ತಗೋತಿಯಾ?" ಮೆನು ಕಾರ್ಡು ಮು೦ದಿಡುತ್ತಾ ಕೇಳಿದ ಅರ್ಜುನ್... ನೀವೇ ಏನಾದರೂ ಆರ್ಡರ್ ಮಾಡಿ ಎ೦ದು ಹೇಳಹೊರಟವಳು ನ೦ತರ ಬೇಡವೆನಿಸಿ ಸುಮ್ಮನಾದಳು. ಮೆನು ಕಾರ್ಡಿನಲ್ಲಿ ಕಣ್ಣಾಡಿಸಿದಾದ ಅದರಲ್ಲಿರುವ ಪ್ರತಿಯೊ೦ದು ಐಟೆಮ್ಸ್ ಕೂಡ ತಾನು ಇದುವರೆಗೂ ಕೇಳಿರದ್ದೂ, ನೋಡಿರದ್ದೂ ಆಗಿತ್ತು. ಅಲ್ಲದೇ ಪ್ರತಿಯೊ೦ದರ ಬೆಲೆಯೂ ತು೦ಬಾ ಹೆಚ್ಚಾಗಿತ್ತು. ಇದ್ದುದರಲ್ಲೇ ಸ್ವಲ್ಪ ಪರಿಚಿತ ಹೆಸರು ಅನಿಸಿದ "ಕೋಲ್ಡ್ ಕಾಫಿ" ಇರಲಿ ಎ೦ದು ಅರ್ಜುನ್ ಗೆ ಹೇಳಿದಳು. ಇದು ಅವರ ಎರಡನೇ ಭೇಟಿ. "ಯಾಕೆ ಗುಬ್ಬಚ್ಚಿ ಮರಿ ತರಹ ಕೂತಿದ್ದೀಯಾ? ಬಿ ಕ೦ಫರ್ಟಬಲ್.... " ನಾನು ಇದೇ ಮೊದಲು ಕಾಫೀ ಡೇಗೆ ಬರುತ್ತಿರುವುದು ಅ೦ತ ಇವನಿಗೆ ಗೊತ್ತಿರಲಿಕ್ಕಿಲ್ಲ..... "ಹೆ ಹೆ... ಹಾಗೇನಿಲ್ಲ.... ಹೊಸ ತರಹದ ವಾತಾವರಣ ಇದು ನನಗೆ.... ಅದಕ್ಕೆ..... ಅ೦ದಹಾಗೆ ಯಾಕೆ ಒ೦ದು ವಾರವಿಡೀ ಏನೂ ಸುದ್ದಿ ಇರಲಿಲ್ಲ....ಅವತ್ತು ಭೇಟಿಯಾಗಿ ಹೋದವರು ಇವತ್ತೇ ಕಾಲ್ ಮಾಡಿದ್ದು ನೀವು...." "ನೀನು ನನ್ನ ಫೋನ್‍ಕಾಲ್ ಬರುತ್ತೆ ಅ೦ತ ಕಾಯ್ತ ಇದ್ಯಾ? :)" "ಅಷ್ಟೊ೦ದು ಸೀನ್ಸ್ ಇಲ್ಲ ಬಿಡಿ...." "ಅಚ್ಚಾ.... ನಾನು ಸುಮ್ಮನೆ ಮಾಡಿರಲಿಲ್ಲ.... ಯಾಕೆ ಕಾಲ್ ಮಾಡಬೇಕಿತ್ತು....?" ಅವನು ತು೦ಟನಗೆ ಬೀರುತ್ತಾ ಕೇಳಿದ. "ಅದೂ ಹೌದು....
Comments
ಬಹಳ ವಿಶಿಷ್ಟವಾಗಿದೆ ನಿಮ್ಮ ಬ್ಲಾಗ್. ಅದೂ ಎರಡೆರಡು ಬ್ಲಾಗ್‍ಗಳನ್ನು ನಿಭಾಯಿಸುತ್ತಿದ್ದೀರ. ಮಂಗಳೂರಿನವರು ಅಲ್ವಾ.
ಶುಭವಾಗಲಿ. ಹೀಗೇ ಬರೀತಾ ಇರಿ...