(ಬಹಳ ಸಮಯದ ನಂತರ ಬರೆದ ಒಂದು ಕತೆ) ಗೇರುಬೀಜದ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುವ ಸುಮತಿಗೂ ರತ್ನ ಉಲ್ಲಾಳ್ದಿಗೂ ಮುಂಚಿನಿಂದಲೂ ದ್ವೇಷ ಅಂತೇನೂ ಇರಲಿಲ್ಲ. ಹಾಗೆ ನೋಡಿದರೆ ಸುಮತಿ ಕೆಲಸಕ್ಕೆ ಹೋಗುವ ದಾರಿ ಉಲ್ಲಾಳ್ದಿಯ ಮನೆಯ ಮುಂದೆಯೇ ಇದೆ. ಪ್ರತಿದಿನ ಕೆಲಸಕ್ಕೆ ಹೋಗುವಾಗ “ಉಲ್ಲಾಳ್ದಿ..... ಎಂಚ ಉಲ್ಲರ್” ಎ೦ದು ಕೇಳಿಯೇ ಹೋಗುತ್ತಾಳೆ ಸುಮತಿ. ಹೀಗಿದ್ದ ಅವರ ಸಂಬಂಧ ಹಳಸಲು ಹಲವು ಕಾರಣಗಳಿವೆ. ಇಲ್ಲಿ ರತ್ನಕ್ಕನನ್ನು ಉಲ್ಲಾಳ್ದಿ ಎಂದು ಕರೆದರೂ ಆಕೆ ಊರಿಗೆ ಯಜಮಾನ್ತಿ ಅಂತ ಏನು ಅಲ್ಲ. ತುಳುನಾಡಿನ ಹಳ್ಳಿಗಳಲ್ಲಿ ಸಾಕಷ್ಟು ಅನುಕೂಲಸ್ತರಾಗಿದ್ದು ಗೇಣಿಗೆ ಭೂಮಿ ಕೊಡುವ ಮನೆಯ ಯಜಮಾನ್ತಿಯನ್ನು ಉಲ್ಲಾಳ್ದಿ ಅಂತ ಕರೆಯುವ ವಾಡಿಕೆ ಇದೆ. ಆದರೆ ರತ್ನಕ್ಕ ಅಂತ ಶ್ರೀಮಂತ ಮನೆಯ ಯಜಮಾನ್ತಿ ಏನಲ್ಲ. ಹಾಗೆ ನೋಡಿದರೆ ರತ್ನಕ್ಕ ಆ ಊರಿನವರೇ ಅಲ್ಲ. ದೂರದ ಬ್ರಹ್ಮಾವರದಿಂದ ಈ ಊರಿಗೆ ಮದುವೆಯಾಗಿ ಬಂದ ಶೆಟ್ಟರ ಹೆಣ್ಣು ಮಗಳು. ಆ ಹಳ್ಳಿಯಲ್ಲಿ ಅನೇಕ ಶೆಡ್ತೀರು ಉಲ್ಲಾಳ್ದಿ ಎ೦ದು ಕರೆಸಲ್ಪಡುತ್ತಿದ್ದುದನ್ನು ನೋಡಿ ತನ್ನನ್ನೂ ಉಲ್ಲಾಳ್ದಿ ಎ೦ದು ಕರೆದರೆ ಚೆನ್ನಾಗಿತ್ತು ಅಂತ ರತ್ನಕ್ಕನಿಗೆ ತು೦ಬಾ ಸಲ ಅನಿಸಿದ್ದಿದೆ. ಆದರೆ ಆ ಹಳ್ಳಿಯಲ್ಲಿ ಉಲ್ಲಾಳ್ದಿ ಎಂದು ಕರೆಯಲ್ಪಡುತ್ತಿದ್ದ ಶೆಡ್ತೀರು ಆ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮದುವೆಯಾಗಿ ಅಲ್ಲೇ ತಳವೂರಿದವರು. ಮನೆಯ ಹಾಗೂ ಜಮೀನಿನ ಯಜಮಾನಿಕೆ ನಡೆಸುತ್ತಿದ್ದ ಗತ್ತಿನ ಶೆಡ್ತೀರು ಅವರು. ಅವರದ್ದು ಅಳಿಯ
ಈ ತೀರದಲ್ಲೀಗ ಕತ್ತಲು ನಾನು ಚೆನ್ನಾಗಿದ್ದೇನೆ... ಕಾರಣಗಳು ಇಲ್ಲ ಅಂತೇನಿಲ್ಲ ಚೆನ್ನಾಗಿಲ್ಲದಿರಲು! ಕೋಣೆಯಲ್ಲಿ ಇನ್ನೂ ಸತ್ತು ಮಲಗಿದೆ ನಾನೇ ಬಡಿದು ಕೊಂದ ಲಕ್ಷ್ಮಿ ಚೇಳು ಇನ್ನು ರಾತ್ರಿ ಮಲಗಿದ ಹಾಗೆಯೇ ಅಮ್ಮ ಚೇಳು ಕಡಿದು ಸೇಡು ತೀರಿಸಿಕೊಳ್ಳಬಹುದೇ? ಇವೆಲ್ಲವನ್ನೂ ಪರಿಗಣಿಸಿದರೆ ಹೌದು ಚೆನ್ನಾಗಿಲ್ಲ ನಾನು! ನನ್ನ ಮನದಲ್ಲಿ ನೀರವ ಮೌನ ಕಾರಣ ಹುಡುಕುತ್ತಿದ್ದೇನೆ ಎಲ್ಲೋ ಗಾಡಿ ಓಡುವ ಸದ್ದು ಇರುಳಿನಲ್ಲೂ ಧಾವಂತಕ್ಕಿಲ್ಲ ವಿಶ್ರಾಂತಿ ಈ ವಿಷಯಗಳಲ್ಲ ನಾ ಹೇಳ ಹೊರಟಿದ್ದು ಬಿಡು, ಎಲ್ಲವನ್ನೂ ಹೇಳಬೇಕಾದ ಜರೂರತ್ತೇನಿದೆ? ಹೇಗಿದ್ದೀಯ ನೀನು? ಆ ತೀರದಲ್ಲಿನ ಸಂಗತಿಗಳೇನು?