ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ...
ಭಾವನೆಗಳ ವಿನಿಮಯ...
Comments
modibandide ...
dayavittu munduvaresi