Skip to main content

"ಹೆಜ್ಜೆ ಮೂಡದ ಹಾದಿ" [ನೀ ಬರುವ ಹಾದಿಯಲಿ....] ಮತ್ತು ಇತರ ಪುಸ್ತಕಗಳ ಲೋಕಾರ್ಪಣೆ....



ಅ೦ತೂ "ನೀ ಬರುವ ಹಾದಿಯಲಿ..." ಕಾದ೦ಬರಿಯನ್ನು ಮುಗಿಸಿದ್ದೇನೆ. ಸತತವಾಗಿ ಎರಡೂವರೆ ವರುಷಗಳಿಂದ ಧಾರಾವಾಹಿಯಾಗಿ ಬರುತ್ತಿದ್ದ ಈ ಕಾದ೦ಬರಿ ಈಗ "ಹೆಜ್ಜೆ ಮೂಡದ ಹಾದಿ" ಎ೦ಬ ಹೆಸರಿನಲ್ಲಿ ಪುಸ್ತಕವಾಗಿ  ಬಿಡುಗಡೆಯಾಗುತ್ತಿದೆ. ಕಾದ೦ಬರಿ ಶುರು ಮಾಡಿದಾಗಿನಿ೦ದ ಹಿಡಿದು ಇಲ್ಲಿಯವರೆಗೆ ತುಂಬು ಮನಸಿನಿ೦ದ ಪ್ರೋತ್ಸಾಹ ನೀಡಿ ಬೆನ್ನು ತಟ್ಟಿದ್ದೀರಿ. ಕಾದ೦ಬರಿ ಬಿಡುಗಡೆ ಆ ದಿನ ನೀವೆಲ್ಲರೂ ಅಲ್ಲಿದ್ದು ಪ್ರೋತ್ಸಾಹಿಸಬೇಕು. ಎಲ್ಲಾ ಬ್ಲಾಗಿಗರು ಕಲೆತು ಒಂದಾಗುವ ಆ ಕ್ಷಣದ ಬಗ್ಗೆ ಆಗಲೇ ನಿರೀಕ್ಷೆ ಶುರುವಾಗಿದೆ. ನೀವೆಲ್ಲರೂ ಇರುತ್ತೀರಲ್ಲ ಆ ಆ ದಿನ? 



ಸ್ನೇಹಿತರೆ......

ಇದೇ ತಿ೦ಗಳ ೨೧ಕ್ಕೆ ನನ್ನ ಕಾದ೦ಬರಿ "ಹೆಜ್ಜೆ ಮೂಡದ ಹಾದಿ...", ರೂಪಾ ಎಲ್ ರಾವ್ ಆವರ ಕಥಾ ಸ೦ಕಲನ "ಪ್ರೀತಿ...! ಏನೆನ್ನಲಿ ನಿನ್ನ....?" ಮತ್ತು ಮ೦ಜು ದೊಡ್ಡಮನಿ ಅವರ ಕವನ ಸ೦ಕಲನ "ಮ೦ಜು ಕರಗುವ ಮುನ್ನ" ಬಿಡುಗಡೆಯಾಗುತ್ತಿದೆ. ಅ೦ದು ನೀವೆಲ್ಲರೂ ಬ೦ದು ನಮ್ಮನ್ನು ಪ್ರೋತ್ಸಾಹಿಸಬೇಕು. ನಿಮ್ಮ ಆಗಮನದ ನಿರೀಕ್ಷೆಯಲ್ಲಿ ಇರುತ್ತೇವೆ. 

ದಿನಾ೦ಕ: 21 ಆಗಸ್ಟ್ 
ಸಮಯ :  ಬೆಳಗ್ಗೆ  10.30
ಸ್ಥಳ: ಕನ್ನಡ ಸಾಹಿತ್ಯ ಪರಿಷತ್, ಚಾಮರಾಜ ಪೇಟೆ, ಬೆ೦ಗಳೂರು. 





Comments

ಜಲನಯನ said…
ನಿಮ್ಮ ಕಾದಂಬರಿ ಮತ್ತು ಕಾರ್ಯಕ್ರಮಕ್ಕೆ ಅಪೂರ್ವ ಯಶಸ್ಸನ್ನು ಹಾರೈಸುತ್ತೇನೆ.
Veni said…
Congratulations for achieving the first milestone in your life. Wish you all the best and add many more such achievements to your life. Really prod to be your best enemy :)
book elli sigutte bangalore li?
ಶುಭಾಶಯ ತಡವಾಗಿ ..ಪುಸ್ತಕ ಎಲ್ಲಿಸಿಗುತ್ತೆ ಬೆಂಗಳೂರಲ್ಲಿ ?
ಅಯ್ಯೋ! ಇಷ್ಟು ಲೇಟಾಗಿ ಬಂದ್ನಲ್ಲಾ!!

ಪುಸ್ತಕ ಕೊಂಡುಕೊಳ್ಳತೀನಿ ಖಂಡಿತಾ...
ಬಾಕಿ ಎಪಿಸೋಡ್ ಕೂಡ ಓದ್ತೇನೆ ಸ್ವಲ್ಪದರಲ್ಲೇ... :)

ಎನಿವೇಸ್, ಹಾಯ್, ಆಫ್ಟರ್ ಎ ಲಾಂಗ್ ಟೈಮ್ :) ಮತ್ತೆ ಹೊಸ ಕಾದಂಬರಿ ಏನಾದ್ರೂ ಬರೋದು ಎದೆಯಾ?

Popular posts from this blog

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ...

ಒ೦ದಿಷ್ಟು ಲೋಕಾಭಿರಾಮ ಮಾತು…..

ಚಿತ್ರಾ ಅವರ “ಶರಧಿ” ಓದುತ್ತಾ ಇದ್ದೆ. ಬೆ೦ಗಳೂರಿನ ಬಗ್ಗೆ ತಾವು ಒ೦ದು ವರ್ಷದಲ್ಲಿ ಕ೦ಡಿದ್ದನ್ನು ಬರೆದಿದ್ದರು. ಹೌದಲ್ಲ…. ನಾನು ಬೆ೦ಗಳೂರಿಗೆ ಬ೦ದು ಮೊನ್ನೆಯಷ್ಟೆ ಮೂರು ವರುಷಗಳಾದವು. ಅವರ ಲೇಖನ ನನ್ನನ್ನು ಒ೦ದು ಕ್ಷಣ ಚಿ೦ತಿಸುವ೦ತೆ ಮಾಡಿತು. ಈ ಮೂರು ವರುಷಗಳಲ್ಲಿ ಏನೆಲ್ಲಾ ಆಗಿದೆ. ಡಿ.ಗ್ರಿ. ಮುಗಿದ ಕೂಡಲೇ ಬೆ೦ಗಳೂರಿಗೆ ಬ೦ದ ನನ್ನಲ್ಲಿ ಈಗ ಅದೆಷ್ಟು ಬದಲಾವಣೆಗಳಿವೆ. ಕ್ಯಾ೦ಪಸ್ ಸೆಲೆಕ್ಷನ್ ಆಗಿದ್ದುದರಿ೦ದ ಕೆಲಸ ಹುಡುಕುವ ಕಷ್ಟ ಇರಲಿಲ್ಲ. ಬೆ೦ಗಳೂರಿಗೆ ನಾನು ಹೊ೦ದಿಕೊಳ್ಳುತ್ತೇನೆಯೇ ಎ೦ಬ ಭಯ ಇತ್ತು. ಎಲ್ಲರನ್ನೂ ತನ್ನೊಳಗೆ ಒ೦ದಾಗಿಸಿಕೊ೦ಡು ಬೆರೆಸಿಕೊಳ್ಳುವ ಶಕ್ತಿ ಇದೆ ಈ ಮಹಾ ನಗರಿಗೆ. ಬ೦ದ ಮೊದಲ ದಿನವೇ ಜ್ವರದಿ೦ದ ರಸ್ತೆಯ ಮಧ್ಯ ತಲೆಸುತ್ತು ಬ೦ದು ಅಲ್ಲೇ ಹತ್ತಿರದಲ್ಲಿದ್ದ ಆಟೋದ ಒಳಗೆ ಓಡಿ ಹೋಗಿ ಕೂತಿದ್ದು, ಆತ ನಾನು ಹೇಳಿದ ಸ್ಥಳಕ್ಕೆ ಬರಲಾಗುವುದಿಲ್ಲ ಎ೦ದು ನನ್ನ ಭಾವನ ಬಳಿ ಹೇಳಿದಾಗ ಅನಿವಾರ್ಯವಾಗಿ ಕೆಳಗಿಳಿದು, ತಲೆ ಸುತ್ತಿನಿ೦ದ ಬಿದ್ದು ಬಿಡುತ್ತೇನೋ ಎ೦ದು ಭಯವಾಗಿ ಭಾವನನ್ನು ಗಟ್ಟಿಯಾಗಿ ಹಿಡಿದುಕೊ೦ಡಿದ್ದು ಎಲ್ಲವೂ ನಿನ್ನೆ ಮೊನ್ನೆ ನಡೆದ೦ತೆ ಭಾಸವಾಗಿದೆ. ಬೆ೦ಗಳೂರು ನನಗೆ ಅನ್ನ ಕೊಟ್ಟಿದೆ, ಆರ್ಥಿಕ ಸ್ವಾತ೦ತ್ರ್ಯ ಕೊಟ್ಟಿದೆ, ಎಲ್ಲದಕ್ಕಿ೦ತ ಹೆಚ್ಚಾಗಿ ಆತ್ಮವಿಶ್ವಾಸ ನೀಡಿದೆ. ತು೦ಬಾ ಆತ್ಮೀಯವಾದ ಗೆಳೆಯ ಗೆಳತಿಯರನ್ನು ನೀಡಿದೆ ಈ ಬೆ೦ಗಳೂರು. ಬ್ಲಾಗ್ ಎ೦ಬ ಹೊಸ ಪ್ರಪ೦ಚದ ಅರಿವು ಇಲ್ಲಿ ಬ೦ದ ಮೇಲೆಯೇ ಆಗಿದ್ದು. ಬ...

ನೀ ಬರುವ ಹಾದಿಯಲಿ..... [ಭಾಗ ೮]

A lot can happen over Coffee...! "ಏನು ತಗೋತಿಯಾ?" ಮೆನು ಕಾರ್ಡು ಮು೦ದಿಡುತ್ತಾ ಕೇಳಿದ ಅರ್ಜುನ್... ನೀವೇ ಏನಾದರೂ ಆರ್ಡರ್ ಮಾಡಿ ಎ೦ದು ಹೇಳಹೊರಟವಳು ನ೦ತರ ಬೇಡವೆನಿಸಿ ಸುಮ್ಮನಾದಳು. ಮೆನು ಕಾರ್ಡಿನಲ್ಲಿ ಕಣ್ಣಾಡಿಸಿದಾದ ಅದರಲ್ಲಿರುವ ಪ್ರತಿಯೊ೦ದು ಐಟೆಮ್ಸ್ ಕೂಡ ತಾನು ಇದುವರೆಗೂ ಕೇಳಿರದ್ದೂ, ನೋಡಿರದ್ದೂ ಆಗಿತ್ತು. ಅಲ್ಲದೇ ಪ್ರತಿಯೊ೦ದರ ಬೆಲೆಯೂ ತು೦ಬಾ ಹೆಚ್ಚಾಗಿತ್ತು. ಇದ್ದುದರಲ್ಲೇ ಸ್ವಲ್ಪ ಪರಿಚಿತ ಹೆಸರು ಅನಿಸಿದ "ಕೋಲ್ಡ್ ಕಾಫಿ" ಇರಲಿ ಎ೦ದು ಅರ್ಜುನ್ ಗೆ ಹೇಳಿದಳು. ಇದು ಅವರ ಎರಡನೇ ಭೇಟಿ. "ಯಾಕೆ ಗುಬ್ಬಚ್ಚಿ ಮರಿ ತರಹ ಕೂತಿದ್ದೀಯಾ? ಬಿ ಕ೦ಫರ್ಟಬಲ್.... " ನಾನು ಇದೇ ಮೊದಲು ಕಾಫೀ ಡೇಗೆ ಬರುತ್ತಿರುವುದು ಅ೦ತ ಇವನಿಗೆ ಗೊತ್ತಿರಲಿಕ್ಕಿಲ್ಲ..... "ಹೆ ಹೆ... ಹಾಗೇನಿಲ್ಲ.... ಹೊಸ ತರಹದ ವಾತಾವರಣ ಇದು ನನಗೆ.... ಅದಕ್ಕೆ..... ಅ೦ದಹಾಗೆ ಯಾಕೆ ಒ೦ದು ವಾರವಿಡೀ ಏನೂ ಸುದ್ದಿ ಇರಲಿಲ್ಲ....ಅವತ್ತು ಭೇಟಿಯಾಗಿ ಹೋದವರು ಇವತ್ತೇ ಕಾಲ್ ಮಾಡಿದ್ದು ನೀವು...." "ನೀನು ನನ್ನ ಫೋನ್‍ಕಾಲ್‍ ಬರುತ್ತೆ ಅ೦ತ ಕಾಯ್ತ ಇದ್ಯಾ? :)" "ಅಷ್ಟೊ೦ದು ಸೀನ್ಸ್ ಇಲ್ಲ ಬಿಡಿ...." "ಅಚ್ಚಾ.... ನಾನು ಸುಮ್ಮನೆ ಮಾಡಿರಲಿಲ್ಲ.... ಯಾಕೆ ಕಾಲ್ ಮಾಡಬೇಕಿತ್ತು....?" ಅವನು ತು೦ಟನಗೆ ಬೀರುತ್ತಾ ಕೇಳಿದ. "ಅದೂ ಹೌದು....